ADVERTISEMENT

ಬಾಂಬ್‌ ಕರೆ: ತನಿಖೆಗೆ ವಿಜಯೇಂದ್ರ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2023, 16:12 IST
Last Updated 1 ಡಿಸೆಂಬರ್ 2023, 16:12 IST
<div class="paragraphs"><p>ಬಿ.ವೈ. ವಿಜಯೇಂದ್ರ</p></div>

ಬಿ.ವೈ. ವಿಜಯೇಂದ್ರ

   

ಬೆಂಗಳೂರು: ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹುಸಿ ಎಂದು ಹಗುರವಾಗಿ ಪರಿಗಣಿಸದೇ ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರಾಜ್ಯದಲ್ಲಿ ಸಮಾಜ ಕಂಟಕ ಶಕ್ತಿಗಳಿಗೆ ಪೊಲೀಸ್‌ ಭಯವೇ ಇಲ್ಲದಂತಾಗಿದೆ. ಇದರ ಪರಿಣಾಮವಾಗಿಯೇ ಕಿಡಿಗೇಡಿಗಳು ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಇಡಲಾಗಿದೆ ಎಂದು ಭಯದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು‘ ಎಕ್ಸ್‌’ನಲ್ಲಿ ಹೇಳಿದ್ದಾರೆ.

ADVERTISEMENT

‘ಸಮಾಜಪೀಡಕ ಶಕ್ತಿಗಳು ಶಾಲೆಗಳನ್ನೇ ಗುರಿಯಾಗಿಸಿಕೊಂಡು ಬೆದರಿಕೆ ಒಡ್ಡಿದ್ದಾರೆ ಎಂದರೆ ಈ ಕುರಿತು ಗಂಭೀರ ತನಿಖೆ ನಡೆಸಬೇಕು ಮತ್ತು ಮುಂಜಾಗ್ರತೆ ವಹಿಸಬೇಕಾಗಿರುವುದು ಸರ್ಕಾರದ ಆದ್ಯತೆ ಆಗಬೇಕು. ರಾಜ್ಯದ ಪ್ರತಿಯೊಂದು ಶಾಲೆಗಳಿಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಶಿಕ್ಷಕಕರು ಹಾಗೂ ಪೋಷಕರಿಗೆ ಆತಂಕ ರಹಿತ ವಾತಾವರಣ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.