ADVERTISEMENT

ಪ್ರತಾಪಸಿಂಹಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ ಎಂದ ಬಿ.ವೈ. ವಿಜಯೇಂದ್ರ

ಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮಾರ್ಚ್ 2024, 9:41 IST
Last Updated 27 ಮಾರ್ಚ್ 2024, 9:41 IST
<div class="paragraphs"><p>ಬಿ.ವೈ. ವಿಜಯೇಂದ್ರ ಮಾತನಾಡಿದರು</p></div>

ಬಿ.ವೈ. ವಿಜಯೇಂದ್ರ ಮಾತನಾಡಿದರು

   

ಮಡಿಕೇರಿ: ಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು‌.

ADVERTISEMENT

ಪ್ರತಾಪಸಿಂಹ ಅವರಿಗೆ ಟಿಕೆಟ್ ತಪ್ಪಿದೆ ಎಂದು ಭಾವಿಸಬಾರದು. ಅವರು ಮುಂದೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಭೂಮಿಕೆ ನಿಭಾಯಿಸಲಿದ್ದಾರೆ ಎಂದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇವಲ ಒಂದು ಜಾತಿಗೆ ಮಾತ್ರ ಸೀಮಿತರಾಗಿಲ್ಲ. ಅವರು ಸಾಮಾನ್ಯ ಕಾರ್ಯಕರ್ತರ ಇಚ್ಛೆಗೆ ಸ್ಪಂದಿಸಲಿದ್ದಾರೆ ಎಂದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.