ADVERTISEMENT

ಬಿ.ವೈ.ವಿಜಯೇಂದ್ರ ನಾಡಗೀತೆ ಸರಿಯಾಗಿ ಅರ್ಥೈಸಿಕೊಳ್ಳಲಿ: ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2025, 12:14 IST
Last Updated 16 ಮಾರ್ಚ್ 2025, 12:14 IST
<div class="paragraphs"><p> ಡಿ.ಕೆ.ಶಿವಕುಮಾರ್‌</p></div>

ಡಿ.ಕೆ.ಶಿವಕುಮಾರ್‌

   

ಗದಗ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲು ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ಸರಿಯಾಗಿ ಓದಬೇಕು. ಯಾರ‍್ಯಾರು ಸೇರಿದರೆ ಕರ್ನಾಟಕ ಶಾಂತಿಯ ತೋಟ ಆಗುತ್ತದೆ ಎಂಬುದು ಆಗ ಗೊತ್ತಾಗಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ 4ರಷ್ಟು ಮೀಸಲಾತಿ ಕೊಟ್ಟಿರುವುದಕ್ಕೆ ಸಂಬಂಧಿಸಿದಂತೆ ಬಿ.ವೈ.ವಿಜಯೇಂದ್ರ ಟೀಕೆಗೆ ಭಾನುವಾರ ತಿರುಗೇಟು ನೀಡಿದರು.

ADVERTISEMENT

‘ಮುಸ್ಲಿಂ, ಕ್ರಿಶ್ಚಿಯನ್‌, ಸಿಖ್, ಬೌದ್ಧರೆಲ್ಲ ನಮ್ಮ ದೇಶದ ಪ್ರಜೆಗಳು. ನಮ್ಮ ರಾಜ್ಯದಲ್ಲಿರುವ ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಬಗ್ಗೆ ನಾವು ಕಾಳಜಿ ಮಾಡುತ್ತೇವೆ’ ಎಂದರು.

‘ಸಮಬಾಳು, ಸಮಪಾಲು ಎಂದು ಹೇಳುವ ಬಿಜೆಪಿ ನಾಯಕರು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರನ್ನು ಎಂಎಲ್‌ಸಿ, ರಾಜ್ಯಸಭಾ ಸದಸ್ಯ ಅಥವಾ ಕೇಂದ್ರದಲ್ಲಿ ಮಂತ್ರಿ ಮಾಡಲಿ. ಆಗ, ಬಿ.ವೈ.ವಿಜಯೇಂದ್ರಗೆ ಮಾತನಾಡಲು ಅವಕಾಶ ಸಿಗಲಿದೆ’ ಎಂದರು.

‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಬೇಕಿದೆ. ಅದಕ್ಕಾಗಿ, ಸಚಿವರಿಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ಮಾಡುವಂತೆ ಸೂಚನೆ ಕೊಡಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.