ADVERTISEMENT

ಉಪಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ, ಮೈತ್ರಿಗೆ ಮತದಾರ ಒಲವು

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2018, 4:30 IST
Last Updated 6 ನವೆಂಬರ್ 2018, 4:30 IST
   

ಬೆಂಗಳೂರು: ಪಂಚ ಕ್ಷೇತ್ರಗಳ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಗ್ರಪ್ಪ 80 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಮೀಪದ ಪ್ರತಿಸ್ಪರ್ದಿ ಬಿಜೆಪಿಯ ಶಾಂತಾ ತೀವ್ರ ಹಿನ್ನಡೆ ಅನುಭವಿಸಿದ್ದಾರೆ.

ಜಮಖಂಡಿ ಮತ್ತು ಮಂಡ್ಯದಲ್ಲೂ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ. ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 6000 ಮತಗಳನ್ನು ಮಾತ್ರ ಪಡೆದಿದ್ದಾರೆ.

ADVERTISEMENT

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಗೆಲುವಿನ ಹಾದಿಯಲ್ಲಿದ್ದಾರೆ. ಈ ಐದು ಕ್ಷೇತ್ರಗಳಲ್ಲೂ ಮತದಾರರು ಮೈತ್ರಿ ಸರ್ಕಾರದ ಪರ ಒಲವು ತೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.