ADVERTISEMENT

ಕರ್ತವ್ಯ ಲೋಪ: 6 ಸಿಬ್ಬಂದಿ ಅಮಾನತು

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2019, 14:48 IST
Last Updated 30 ನವೆಂಬರ್ 2019, 14:48 IST
   

ಬೆಂಗಳೂರು: ನಗರದ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರು ಸಿಬ್ಬಂದಿಯನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ನಗರದ ವಿವಿಧೆಡೆ ಹಾಕಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಂದ ಮಾದರಿ ನೀತಿಸಂಹಿತೆ ಉಲ್ಲಂಘಿಸಿದ ಕುರಿತು ಆರೋಪ ಬಂದಿತ್ತು. ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವಿಚಾರಣೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT