ADVERTISEMENT

'ಇಂಡಿಯಾ' ಜಯಭೇರಿ | ಬಿಜೆಪಿ ವಿರುದ್ಧದ ಆಕ್ರೋಶ ಸ್ಪಷ್ಟವಾಗಿದೆ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜುಲೈ 2024, 15:40 IST
Last Updated 13 ಜುಲೈ 2024, 15:40 IST
<div class="paragraphs"><p>ಡಿ.ಕೆ.ಶಿವಕುಮಾರ್</p></div>

ಡಿ.ಕೆ.ಶಿವಕುಮಾರ್

   

(ಪ್ರಜಾವಾಣಿ ಚಿತ್ರ)

ಬೆಂಗಳೂರು: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟವು 10 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಬಿಜೆಪಿ ಕೇವಲ ಎರಡರಲ್ಲಿ ಮಾತ್ರ ಗೆದ್ದಿದೆ.

ADVERTISEMENT

ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, 'ಎಲ್ಲ ಏಳು ರಾಜ್ಯಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧದ ಜನರ ಆಕ್ರೋಶವು ಉಪಚುನಾವಣೆಯಲ್ಲಿ ಸ್ಪಷ್ಟವಾಗಿ ಎದ್ದು ಕಾಣಿಸುತ್ತಿದೆ. 'ಇಂಡಿಯಾ' ಮೈತ್ರಿಕೂಟಕ್ಕೆ ಜನರ ಬೆಂಬಲ ದಿನದಿಂದ ದಿನಕ್ಕೆ ವರ್ಧಿಸುತ್ತಿದೆ' ಎಂದು ಹೇಳಿದ್ದಾರೆ.

'ದೇಶದಾದ್ಯಂತ ನಡೆದ ಉಪಚುನಾವಣೆಯಲ್ಲಿ ಜಯಗಳಿಸಿದ ನಮ್ಮ 'ಇಂಡಿಯಾ' ಮೈತ್ರಿಕೂಟದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇದು ಮತ್ತಷ್ಟು ಹುರುಪನ್ನು ನೀಡಿದೆ' ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಕಂಡಿದೆ. ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ತಲಾ ನಾಲ್ಕು ಮತ್ತು ಎಎಪಿ, ಡಿಎಂಕೆ ಮತ್ತು ಪಕ್ಷೇತರ ಅಭ್ಯರ್ಥಿ ತಲಾ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.