ADVERTISEMENT

ಆಡಳಿತ ಯಂತ್ರ ದುರುಪಯೋಗ: ರಾಘವೇಂದ್ರ ಆರೋಪ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2018, 9:23 IST
Last Updated 6 ನವೆಂಬರ್ 2018, 9:23 IST
ಗೆಲುವು ಖಚಿತವಾದ ನಂತರ ಶಿವಮೊಗ್ಗ ಮತ ಎಣಿಕೆ ಕೇಂದ್ರದ ಹೊರಗೆ ಕಾದಿದ್ದ ಅಭಿಮಾನಿಗಳತ್ತ ಕೈಬೀಸಿದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿಜಯದ ಸಂಕೇತ ತೋರಿದರು.
ಗೆಲುವು ಖಚಿತವಾದ ನಂತರ ಶಿವಮೊಗ್ಗ ಮತ ಎಣಿಕೆ ಕೇಂದ್ರದ ಹೊರಗೆ ಕಾದಿದ್ದ ಅಭಿಮಾನಿಗಳತ್ತ ಕೈಬೀಸಿದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿಜಯದ ಸಂಕೇತ ತೋರಿದರು.   

ಶಿವಮೊಗ್ಗ: ಮೈತ್ರಿ ಅಭ್ಯರ್ಥಿ ಗೆಲುವಿಗೆ ಸರ್ಕಾರದ ಆಡಳಿತ ಯಂತ್ರವನ್ನೇ ಬಳಸಿದರೂ ಕ್ಷೇತ್ರದ ಮತದಾರರು ಬಿಜೆಪಿ ಬೆಂಬಲಿಸಿದ್ದಾರೆ. ಸಮ್ಮಿಶ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಬಿಜೆಪಿ ವಿಜೇತ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪ್ರತಿಕ್ರಿಯಿಸಿದರು.

ಚುನಾವಣಾ ಪ್ರಚಾರಕ್ಕೆ ಬಂದಿದ್ದ ಕಾಂಗ್ರೆಸ್, ಜೆಡಿಎಸ್ ಮುಖಂಡರು ವೈಯಕ್ತಿಕ ಟೀಕೆ, ಆರೋಪ ಮಾಡಿದರೂ ತಲೆ ಕೆಡಿಸಿಕೊಳ್ಳಲಿಲ್ಲ. ಕಡಿಮೆ ಅವಧಿಯಲ್ಲೂ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಸಾಕಷ್ಟು ಶ್ರಮ ಹಾಕಿದ್ದಾರೆ. ಅವರ ಶ್ರಮಕ್ಕೆ ಮತದಾರರು ಪ್ರತಿಫಲ ನೀಡಿದ್ದಾರೆ ಎಂದರು.

ಕೆಲವು ಭಾಗಗಳಲ್ಲಿ ಹೆಚ್ಚಿನ ಮತ ಬರುವ ನಿರೀಕ್ಷೆ ಇತ್ತು.ಅಲ್ಲಿ ಕಡಿಮೆ ಮತಗಳು ಬಂದಿವೆ. ಹಾಗಾಗಿ, ಗೆಲುವಿನ ಅಂತರ ಕಡಿಮೆಯಾಗಿದೆ ಎಂದು ವಿಶ್ಲೇಷಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.