
ನವದೆಹಲಿ: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದುಪಡಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದೆ.
ಈ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ.
ಮಿನಿ ಅವೆನ್ಯೂ ರಸ್ತೆಯಲ್ಲಿರುವ ಸೇಫ್ ಮೆಡಿಕಲ್ ಸ್ಟೋರ್ ಮುಂಭಾಗ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವುನನ್ನು 2025ರ ಜುಲೈ 15ರಂದು 8 ರಿಂದ 9 ಜನರಿದ್ದ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಈ ಸಂಬಂಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದಲ್ಲಿ ಬೈರತಿ ಬಸವರಾಜ ಐದನೇ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 103 ಮತ್ತು 190ರ ಅಡಿಯಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ಈ ಪ್ರಕರಣವನ್ನು ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.