ADVERTISEMENT

ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ; ಕರ್ನಾಟಕ 6ನೇ ಸ್ಥಾನದಲ್ಲಿದೆ: ಬೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 11:21 IST
Last Updated 16 ಆಗಸ್ಟ್ 2021, 11:21 IST
ಸಚಿವ ಬೈರತಿ ಬಸವರಾಜ
ಸಚಿವ ಬೈರತಿ ಬಸವರಾಜ   

ಬೆಂಗಳೂರು: ‘ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ದೇಶದಲ್ಲಿ ಕರ್ನಾಟಕ 6ನೇ ಸ್ಥಾನದಲ್ಲಿದೆ.ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಮುಂದಿನ ದಿನಗಳಲ್ಲಿ ಮೊದಲ ಸ್ಥಾನ ಪಡೆಯಬೇಕು’ ಎಂದು ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಉಸ್ತುವಾರಿ ವಹಿಸಿರುವ ವ್ಯವಸ್ಥಾಪಕ ನಿರ್ದೇಶಕರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸೂಚಿಸಿದರು.

ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಇಂದಿರಾ ನಗರದಲ್ಲಿರುವ ಕೆಯುಐಡಿಎಫ್‌ಸಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಅವರು ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ, ವಿವಿಧ ಯೋಜನೆಗಳ ಮೂಲಕ ಕಾಮಗಾರಿಗಳಿಗೆ ರಾಜ್ಯದಲ್ಲಿ 2019-20ನೇ ಸಾಲಿನಲ್ಲಿ ₹ 700 ಕೋಟಿ, 2020-21ನೇ ಸಾಲಿನಲ್ಲಿ ₹ 1,300 ಕೋಟಿ ಮತ್ತು 2021-2ನೇ ಸಾಲಿನಲ್ಲಿ ಈವರೆಗೆ ₹ 537 ಕೋಟಿ ವೆಚ್ಚ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷಣ್‌, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ.ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಟಿ. ರೇಜು, ದಾವಣಗೆರೆ, ಶಿವಮೊಗ್ಗ, ತುಮಕೂರು, ಮಂಗಳೂರು, ಹುಬ್ಬಳ್ಳಿ–ಧಾರವಾಡ ಸ್ಮಾರ್ಟ್ ಸಿಟಿ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.