
ಪ್ರಜಾವಾಣಿ ವಾರ್ತೆ
ಬೆಂಗಳೂರು: ಗಲಭೆಪೀಡಿತ ಮಂಗಳೂರಿಗೆ ಭೇಟಿ ನೀಡಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪೊಲೀಸ್ ಅಧಿಕಾರಿಗಳು ಅವಕಾಶ ನೀಡಿಲ್ಲ.
ಇಲ್ಲಿಂದ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಶೇಷ ವಿಮಾನದಲ್ಲಿ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು. ಮಂಗಳೂರಿನಲ್ಲಿ ವಿಮಾನ ಇಳಿಸಲು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರವಾಸ ರದ್ದುಪಡಿಸಿದರು.
ಇತ್ತೀಚೆಗೆ ಆಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದು, ಇನ್ನೂ ಎರಡು ವಾರಗಳ ಕಾಲ ದೂರ ಪ್ರಯಾಣ ಮಾಡದಂತೆ ವೈದ್ಯರು ಸಲಹೆ ಮಾಡಿದ್ದರು. ಆದರೂ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ತೆರಳಲು ಮುಂದಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.