ADVERTISEMENT

60 'ಆದರ್ಶ ಪದವಿಪೂರ್ವ ಕಾಲೇಜು'ಗಳಿಗೆ ಸಚಿವ ಸಂಪುಟ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2023, 18:50 IST
Last Updated 7 ಡಿಸೆಂಬರ್ 2023, 18:50 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಳಗಾವಿ: ರಾಜ್ಯದ ಆಯ್ದ 60 ತಾಲ್ಲೂಕುಗಳಲ್ಲಿನ ವಿಜ್ಞಾನ ಸಂಯೋಜನೆ ಹೊಂದಿರುವ 60 ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ‘ಆದರ್ಶ ಪದವಿ ಪೂರ್ವ ಕಾಲೇಜು’ಗಳನ್ನಾಗಿ ಪರಿವರ್ತಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ.

ಇದರಡಿ ಪ್ರತಿ ಕಾಲೇಜಿಗೆ ತಲಾ ₹83.30 ಲಕ್ಷ ನೀಡಲಾಗುವುದು. ಒಟ್ಟು ₹50 ಕೋಟಿಯನ್ನು ನೀಡಲು ತೀರ್ಮಾನಿಸಲಾಗಿದೆ. ಈ  ಕಾಲೇಜುಗಳಲ್ಲಿ ಅತ್ಯಾಧುನಿಕ ಪ್ರಯೋಗಾಲಯ, ಆಧುನಿಕ ತಂತ್ರಜ್ಞಾನ ಆಧಾರಿತ ಬೋಧನಾ ಪರಿಕರಗಳನ್ನು ಒದಗಿಸಿ, ವಿದ್ಯಾರ್ಥಿಗಳನ್ನು ಐಐಟಿ, ಐಐಎಸ್‌ಸಿ, ವೈದ್ಯಕೀಯ ಸಂಸ್ಥೆಗಳಿಗೆ ಪ್ರವೇಶ ಪಡೆಯುವಂತೆ ತರಬೇತುಗೊಳಿಸಲು ಈ ಕಾಲೇಜುಗಳನ್ನು ಅಣಿ ಮಾಡಲಾಗುತ್ತದೆ.  

ADVERTISEMENT

ಕಲಬುರಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಭಾಗಿತ್ವದಲ್ಲಿ ‘ಪಿಎಂ ಮಿತ್ರ ಪಾರ್ಕ್‌’ ಯೋಜನೆಯಡಿ ಜವಳಿ ಪಾರ್ಕ್‌ ಸ್ಥಾಪನೆಗೆ ಜಂಟಿ ಒಪ್ಪಂದ ಮತ್ತು ನಿರ್ವಹಣೆಗಾಗಿ ವಿಶೇಷ ಯೋಜನೆಗೆ ರೂಪಿಸಲು ಅನುಮೋದನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕರಾವಳಿ ಭಾಗದ ಜಲಮೂಲಗಳ ಮಾಲಿನ್ಯವನ್ನು ತಡೆಗಟ್ಟಲು ಕೆ–ಶೋರ್‌ ಯೋಜನೆಯನ್ನು₹840 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ ನೀಡಲಾಗಿದೆ. ಇದಕ್ಕಾಗಿ ರಾಜ್ಯ ಮಟ್ಟದ ವಿಶೇಷ ಸಶಕ್ತ ಸಮಿತಿಯನ್ನು ರೂಪಿಸಲಾಗುವುದು. ಇದಕ್ಕೆ ವಿಶ್ವಬ್ಯಾಂಕ್‌ ಶೇ 70ರಷ್ಟು ಮತ್ತು ರಾಜ್ಯ ಸರ್ಕಾರ ಶೇ 30 ರಷ್ಟು ಮೊತ್ತ ಭರಿಸಲಿವೆ.

ಅಕ್ರಮ ಪಂಪ್‌ಸೆಟ್‌ಗಳ ಸಕ್ರಮಕ್ಕಾಗಿ ನೋಂದಣಿ ಮಾಡಿಸಿಕೊಂಡ ಮತ್ತು ಮುಂದೆ ನೋಂದಣಿ ಮಾಡಿಸಿಕೊಳ್ಳಲಿರುವ ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್‌ ಸಂಪರ್ಕಕ್ಕೆ ರೈತರೇ ಸ್ವಂತ ಖರ್ಚಿನಲ್ಲಿ ಮೂಲಸೌಕರ್ಯ ಒದಗಿಸಿಕೊಳ್ಳಬೇಕು ಎಂದು ಇಂಧನ ಇಲಾಖೆ ಹೊರಡಿಸಿದ್ದ ಆದೇಶವನ್ನು ಹಿಂದಕ್ಕೆ ಪಡೆಯುವ ವಿಷಯವನ್ನು ಮುಂದೂಡಲಾಗಿದೆ.

ಪ್ರಮುಖ ತೀರ್ಮಾನಗಳು:

  • ಬೆಂಗಳೂರಿನ ಸರ್ಕಾರಿ ಯುನಾನಿ ಮತ್ತು ಹೋಮಿಯೋಪಥಿ ವೈದ್ಯಕೀಯ ಮಹಾ ವಿದ್ಯಾಲಯದ ಮಹಿಳಾ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಗಳ ₹12.13 ಕೋಟಿ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.

  • ಶಿವಮೊಗ್ಗದಲ್ಲಿ ₹80 ಕೋಟಿ ಅಂದಾಜು ವೆಚ್ಚದಲ್ಲಿ ಅತ್ಯುನ್ನತ ಭದ್ರತಾ ಕಾರಾಗೃಹ ಹಾಗೂ ವಸತಿ ಗೃಹಗಳ ನಿರ್ಮಾಣ ಮತ್ತು ₹20 ಕೋಟಿ ಅಂದಾಜು ಮೊತ್ತದಲ್ಲಿ ಭದ್ರತಾ ಉಪಕರಣಗಳು ಹಾಗೂ ಇತರೆ ಮೂಲಸೌಲಭ್ಯಗಳನ್ನು ಒದಗಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.

  • ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ₹25 ಕೋಟಿ ಅಂದಾಜು ವೆಚ್ಚದಲ್ಲಿ ಮಿಲ್ಲೆಟ್‌ ವ್ಯಾಲ್ಯು ಚೈನ್‌ ಪಾರ್ಕ್‌ ಸ್ಥಾಪನೆ ಕಾಮಗಾರಿಗೆ ಒಪ್ಪಿಗೆ. ಇದರ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆ ಕಾರ್ಯಗತಗೊಳಿಸಲಿದೆ.

  • ವಿಜಯಪುರ ಜಿಲ್ಲೆಯ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗಳ ₹49 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

  • ಕೋಲಾರ ಜಿಲ್ಲೆ ಕೆಜಿಎಫ್‌ ತಾಲ್ಲೂಕಿನ ಬಂಗಾರದ ಗಣಿ ಗ್ರಾಮದ  ವಿವಿಧ ಸರ್ವೇ ನಂಬರ್‌ಗಳಲ್ಲಿ ಒಟ್ಟು 962 ಎಕರೆ 20 ಗುಂಟೆ ಜಮೀನನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಕೈಗಾರಿಕಾ ವಸಾಹತು ನಿರ್ಮಿಸಲು ಮಂಜೂರು ಮಾಡಲು ತೀರ್ಮಾನ.

  • ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಮಸೂದೆ 2023ಕ್ಕೆ ಅನುಮೋದನೆ.

  • ವಿಜಯಪುರ ಜಿಲ್ಲೆಯ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗಳ ₹49 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

  • ಕೋಲಾರ ಜಿಲ್ಲೆ ಕೆಜಿಎಫ್‌ ತಾಲ್ಲೂಕಿನ ಬಂಗಾರದ ಗಣಿ ಗ್ರಾಮದ  ವಿವಿಧ ಸರ್ವೇ ನಂಬರ್‌ಗಳಲ್ಲಿ ಒಟ್ಟು 962 ಎಕರೆ 20 ಗುಂಟೆ ಜಮೀನನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಕೈಗಾರಿಕಾ ವಸಾಹತು ನಿರ್ಮಿಸಲು ಮಂಜೂರು ಮಾಡಲು ತೀರ್ಮಾನ.

  • ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಇತರೆ ಕಾನೂನು (ತಿದ್ದುಪಡಿ) ಮಸೂದೆ 2023ಕ್ಕೆ ಅನುಮೋದನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.