ADVERTISEMENT

ಸಂಪುಟ ವಿಸ್ತರಣೆ | ವರಿಷ್ಠರ ಸೂಚನೆಗಾಗಿ ಕಾಯುತ್ತಿರುವೆ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರಿಗೆ ಹಿಂದಿರುಗಿದ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 10:07 IST
Last Updated 19 ಸೆಪ್ಟೆಂಬರ್ 2020, 10:07 IST
   

ಬೆಂಗಳೂರು: ‘ಸಂಪುಟ ವಿಸ್ತರಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿ ಬಂದಿದ್ದೇನೆ. ವರಿಷ್ಠರ ಸೂಚನೆಗಾಗಿ ಕಾಯುತ್ತಿರುವೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ದೆಹಲಿ ಪ್ರವಾಸ ಮುಗಿಸಿ ಶನಿವಾರ ಬೆಂಗಳೂರಿಗೆ ಹಿಂದಿರುಗಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಿರ್ದಿಷ್ಟವಾಗಿ ಯಾವ ದಿನ ಸಂಪುಟ ವಿಸ್ತರಣೆ ನಡೆಯಲಿದೆ ಎಂಬುದನ್ನು ಹೇಳಲಾಗದು. ವರಿಷ್ಠರ ಸೂಚನೆ ಬರುತ್ತಿದ್ದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದರು .

ತಮ್ಮ ದೆಹಲಿ ಭೇಟಿ ಫಲಪ್ರದವಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಏಳು ಸಚಿವರನ್ನು ಭೇಟಿಮಾಡಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಮಾಹಿತಿ ನೀಡಲಾಗಿದೆ. ಸಮಸ್ಯೆಗಳ ಪರಿಹಾರಕ್ಕೆ ಶೀಘ್ರವಾಗಿ ನೆರವಾಗುವಂತೆ ಸಚಿವರಿಗೆ ಸೂಚಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕುವ ವಿಶ್ವಾಸವಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.