ADVERTISEMENT

ಎಲ್ಲ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 9:20 IST
Last Updated 25 ನವೆಂಬರ್ 2025, 9:20 IST
<div class="paragraphs"><p>ಸಿದ್ದರಾಮಯ್ಯ&nbsp; ಮತ್ತು ಡಿ.ಕೆ.ಶಿವಕುಮಾರ್ </p></div>

ಸಿದ್ದರಾಮಯ್ಯ  ಮತ್ತು ಡಿ.ಕೆ.ಶಿವಕುಮಾರ್

   

-ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಎಲ್ಲ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ADVERTISEMENT

ಸುದ್ದಿಗಾರರ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು’ ಎಂದರು.

‘ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕೆ ಇಲ್ಲ’ ಎಂದೂ ತಿಳಿಸಿದರು.‌

ಶಾಸಕರ ಮತ್ತೊಂದು ತಂಡ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ಮೆಗೆ, ‘ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ’ ಎಂದರು.

ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ‘ಆಸ್ಟ್ರೇಲಿಯಾ, ಅಮೆರಿಕ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ’ ಎಂದು ಮುಖ್ಯಮಂತ್ರಿ ತಿಳಿಸಿದರು .

‘ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.