ADVERTISEMENT

ಸಚಿವ ಸಂಪುಟ ಶೀಘ್ರ ವಿಸ್ತರಣೆ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 19:45 IST
Last Updated 7 ಜನವರಿ 2023, 19:45 IST
 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ    

ಚಿತ್ರದುರ್ಗ: ‘ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ನಾಯಕರೊಂದಿಗೆ ವಿಸ್ತೃತವಾಗಿ ಚರ್ಚಿಸಲಾಗಿದೆ. ಶೀಘ್ರವೇ ಸಂಪುಟ ವಿಸ್ತರಣೆ ಆಗಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಮತ್ತೊಂದು ಸುತ್ತಿನ ಸಭೆ ನಡೆದ ಬಳಿಕ ತೀರ್ಮಾನ ಹೊರಬೀಳಲಿದೆ. ಕೆ.ಎಸ್‌.ಈಶ್ವರಪ್ಪ, ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕಲ್ಪಿಸುವ ಬಗ್ಗೆ ಹೈಕಮಾಂಡ್‌ ನಿರ್ಧರಿಸಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

3 ದಿನಗಳಲ್ಲಿ ತೀರ್ಮಾನ– ಬಿಎಸ್‌ವೈ (ಶಿಕಾರಿಪುರ ವರದಿ): ‘ಸಂಪುಟ ವಿಸ್ತರಣೆ ಬಗ್ಗೆ 2–3 ದಿನಗಳಲ್ಲಿ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ‘ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.