ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ. ದೆಹಲಿಯಿಂದ ವರಿಷ್ಠರ ಕರೆ ಬಂದರೆ ಹೋಗುವುದಾಗಿ ಬೊಮ್ಮಾಯಿ ಈ ಹಿಂದೆ ಹೇಳಿದ್ದರು.
ದಾವೋಸ್‌ಗೆ ತೆರಳಲು ಸಿದ್ಧತೆ ನಡೆಸಿದ್ದ ಮುಖ್ಯಮಂತ್ರಿ ಅವರು, ದೆಹಲಿಗೆ ದಿಢೀರ್ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ ದಾವೋಸ್‌ಗೆ ಇದೇ 22ರ ಬೆಳಿಗ್ಗೆ ಪ್ರವಾಸ ಬೆಳೆಸಲಿದ್ದಾರೆ.
‘ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರನ್ನು ಸಂಪರ್ಕಿಸುತ್ತೇನೆ’ ಎಂದು ಹುಬ್ಬಳ್ಳಿಯಲ್ಲಿ ಭಾನುವಾರ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.