ADVERTISEMENT

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಂಪುಟ‌ ಸಭೆ ಆರಂಭ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 9:38 IST
Last Updated 3 ಮಾರ್ಚ್ 2021, 9:38 IST
   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆ ಆರಂಭವಾಗಿದೆ.

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಕಂಪನಿ ಸ್ಥಾಪನೆ, ಆಯುಷ್ ವೈದ್ಯಕೀಯ ಕಾಲೇಜುಗಳ ಬೋಧಕ ಸಿಬ್ಬಂದಿ ಹಾಗೂ ಔಷಧ ನಿಯಂತ್ರಣ ಇಲಾಖೆಯ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಪ್ರತಿಪಕ್ಷಗಳನ್ನು ಎದುರಿಸುವ ಬಗ್ಗೆಯೂ ಸಂಪುಟ‌ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.