ADVERTISEMENT

ಸಂಪುಟ ಉಪಸಮಿತಿ: ಎಂ.ಬಿ.ಪಾಟೀಲ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 26 ಜೂನ್ 2019, 19:19 IST
Last Updated 26 ಜೂನ್ 2019, 19:19 IST
ಎಂ.ಬಿ ಪಾಟೀಲ
ಎಂ.ಬಿ ಪಾಟೀಲ   

ಬೆಂಗಳೂರು: ಜೆ.ಎಸ್‌.ಡಬ್ಲ್ಯೂ ಸ್ಟೀಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಭಾರಿ ವಿರೋಧ ವ್ಯಕ್ತವಾದ ಕಾರಣ, ನಿರ್ಣಯದ ಪುನರ್‌ ಪರಿಶೀಲನೆಗೆ ಗೃಹ ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.

ಜಿಂದಾಲ್‌ಗೆ ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಅಹೋರಾತ್ರಿ ಧರಣಿ ನಡೆಸಿದ್ದರು. ಕಾಂಗ್ರೆಸ್‌ ನಾಯಕ ಎಚ್‌.ಕೆ.ಪಾಟೀಲ ಅವರೂ ಈ ನಿರ್ಣಯವನ್ನು ಖಂಡಿಸಿ ಹೈಕಮಾಂಡ್‌ಗೂ ದೂರು ನೀಡಿದ್ದರು.

ಸಾರ್ವಜನಿಕವಾಗಿಯೂ ವಿರೋಧ ಹೆಚ್ಚಿದ ಕಾರಣ ಜಮೀನು ಮಾರಾಟದ ನಿರ್ಧಾರದ ಸಾಧಕ–ಬಾಧಕಗಳ ಬಗ್ಗೆ ಚರ್ಚಿಸಲು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲು ನಿರ್ಧರಿಸಲಾಯಿತು. ಉಪಸಮಿತಿಯು ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ 3,667.31 ಎಕರೆ ಭೂಮಿಯನ್ನು ಜೆ.ಎಸ್‌.ಡಬ್ಲ್ಯೂ ಲಿಮಿಟೆಡ್‌ ಸಂಸ್ಥೆಯ ಪರವಾಗಿ ಶುದ್ಧ ಕ್ರಯ ಪತ್ರ ಜಾರಿಗೊಳಿಸುವ ಪ್ರಸ್ತಾವನೆ ಕುರಿತು ಸೂಕ್ತ ಶಿಫಾರಸ್ಸುಗಳನ್ನು ನೀಡಲಿದೆ.

ADVERTISEMENT

ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.