ADVERTISEMENT

ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ಕೋವಿಡ್‌ ನಿಯಂತ್ರಣ ಸಂಪುಟ ಉಪ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2023, 12:32 IST
Last Updated 22 ಡಿಸೆಂಬರ್ 2023, 12:32 IST
ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣ ಹಾಗೂ ಅದರ ಕುರಿತು ಪರಾಮರ್ಶೆ ನಡೆಸಲು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ.

ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರನ್ನು ಸಂಪುಟ ಉಪ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಕೋವಿಡ್‌ ನಿಯಂತ್ರಣ ಮತ್ತು ಆ ಕುರಿತು ಪರಿಶೀಲನೆ ನಡೆಸಲು ಸಂಪುಟ ಉಪ ಸಮಿತಿ ರಚಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರನ್ವಯ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಲಾಗಿದೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.