ಬೆಂಗಳೂರು: ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಲು ಮತ್ತು ಹೊರ ಗುತ್ತಿಗೆ ಸಿಬ್ಬಂದಿಗೆ ಸೇವಾ ಭದ್ರತೆ ಕಲ್ಪಿಸುವ ಉದ್ದೇಶದಿಂದ ಸೂಕ್ತ ಶಿಫಾರಸು ಮಾಡಲು ಕಾನೂನು ಸಚಿವ ಎಚ್.ಕೆ.ಪಾಟೀಲ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಂತೋಷ್ ಲಾಡ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಮತ್ತು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಅವರು ಉಪಸಮಿತಿ ಸದಸ್ಯರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.