ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2025-26ನೇ ಸಾಲಿಗೆ ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯ ನಿಯಮಾನುಸಾರ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 15 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ: ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು. ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು ಇಲಾಖೆಯ ವೆಬ್‍ಸೈಟ್ kannadasiri.karnataka.gov.in ನಲ್ಲಿ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.