ಬೆಂಗಳೂರು: ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಎಂ.ಜಟ್ಟಪ್ಪ ಪ್ರಥಮ ಬಹುಮಾನ ಗಳಿಸಿದ್ದಾರೆ.
ರಾಷ್ಟ್ರೀಯ ಭಾವೈಕ್ಯತೆ ಮತ್ತು ಸೌಹಾರ್ದತೆಯನ್ನು ಸಾರುವ ಮತ್ತು ಜನರಲ್ಲಿ ಈ ಭಾವನೆಗಳನ್ನು ಬಿತ್ತುವ ಉದ್ದೇಶದಿಂದ ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ದ್ವಿತೀಯ ಬಹುಮಾನ ಎಚ್.ಶಿವಶಂಕರ್ ಅವರ ಪಾಲಾಯಿತು. ಎನ್.ಚಂದ್ರಕಾಂತ್, ಜಿ.ಅಜಿತ್‌ಕುಮಾರ್, ಆದಿತ್ಯ ಗೌಡ ಮತ್ತು ಆರ್.ರಮ್ಯ ಅವರು ತೃತೀಯ ಬಹುಮಾನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.