ಬೆಂಗಳೂರು: ಉತ್ತರ ಕನ್ನಡದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ರಾಜ್ಯ ಸರ್ಕಾರ ವಶಪಡಿಸಿಕೊಂಡ ಕ್ರಮದ ವಿರುದ್ಧ ರಾಮಚಂದ್ರಾಪುರ ಮಠ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ದೂರು ದಾಖಲಿಸಿದೆ.
‘ಕೋರ್ಟ್‌ನ ಮಧ್ಯಂತರ ಆದೇಶದ ಹೊರತಾಗಿಯೂ ದೇವಾಲಯದ ಆಡಳಿತವನ್ನು ವಶಕ್ಕೆ ಪಡೆದದ್ದು ಸರಿಯಲ್ಲ. ಹೀಗಾಗಿ ದೂರು ದಾಖಲಿಸಲಾಗಿದೆ’ ಎಂದು ಮಠದ ಕಾರ್ಯದರ್ಶಿ ರಾಮಚಂದ್ರ ಅಜ್ಜಕಾನ ತಿಳಿಸಿದ್ದಾರೆ.
‘ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂ ಕೋರ್ಟ್, ದೇವಾಲಯದ ಆಡಳಿತವನ್ನು ಮಠವೇ ಮುಂದುವರಿಸಬೇಕು ಎಂದು ಮಧ್ಯಂತರ ಆದೇಶ ನೀಡಿತ್ತು. ಮುಖ್ಯ ನ್ಯಾಯಮೂರ್ತಿಯವರ ಆದೇಶವನ್ನೇ ಸರ್ಕಾರ ಉಲ್ಲಂಘಿಸಿದರೆ ನ್ಯಾಯವನ್ನು ಎಲ್ಲಿ ಹುಡುಕುವುದು’ ಎಂದು ಅವರು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.