ADVERTISEMENT

ವಿಧಾನ ಪರಿಷತ್ ಸದಸ್ಯ ರವಿಕುಮಾರ್‌ ವಿರುದ್ಧದ ಪ್ರಕರಣಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 1:22 IST
Last Updated 26 ಜುಲೈ 2025, 1:22 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಎನ್‌.ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್‌ ಶ್ಯಾಮ್‌ ಅವರ ವಾದ ಪುರಸ್ಕರಿಸಿದ ನ್ಯಾಯಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ದೂರುದಾರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ADVERTISEMENT

ಪ್ರಕರಣವೇನು?: ‘ಬಿಜೆಪಿಯಿಂದ ಜುಲೈ 1ರಂದು ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ರವಿಕುಮಾರ್ ಅವರು ಶಾಲಿನಿ ರಜನೀಶ್‌ ಕುರಿತು ಅಸಂಸದೀಯ ಪದ ಬಳಸಿ ಮಾತನಾಡಿದ್ದಾರೆ’ ಎಂದು ಆರೋಪಿಸಿ ಜೆ.ಪಿ.ನಗರದ ನಿವಾಸಿ, ‘ನಂದಾದೀಪಾ ಮಹಿಳಾ ಸಂಘ’ದ ಅಧ್ಯಕ್ಷೆ ನಗರ್ತನಾ ನೀಡಿದ ದೂರಿನಡಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.