ADVERTISEMENT

ಹಿತ್ತಲಲ್ಲಿ ಗಾಂಜಾ ಗಿಡ ಬೆಳೆದ ಆರೋಪ: ಹಿರಿಯ ನಾಗರಿಕರ ವಿರುದ್ಧದ ಪ್ರಕರಣ ರದ್ದು

​ಪ್ರಜಾವಾಣಿ ವಾರ್ತೆ
Published 5 ಮೇ 2025, 23:25 IST
Last Updated 5 ಮೇ 2025, 23:25 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಹಿತ್ತಲಿನಲ್ಲಿ ಐದರಿಂದ ಆರು ಗಾಂಜಾ ಗಿಡಗಳನ್ನು ಬೆಳೆಸಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಹಿರಿಯ ನಾಗರಿಕರೊಬ್ಬರ ವಿರುದ್ಧ; ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ ದಾಖಲಿಸಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

‘ನನ್ನ ವಿರುದ್ಧ ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 34ನೇ ಸೆಷನ್ಸ್‌ ಕೋರ್ಟ್‌ನಲ್ಲಿರುವ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸಬೇಕು’ ಎಂದು ಕೋರಿ ಜಯನಗರದ 7ನೇ ಬ್ಲಾಕ್‌ ನಿವಾಸಿ ಚಂದ್ರಶೇಖರ್‌ (67) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

‘ಅರ್ಜಿದಾರರು ಗಾಂಜಾ ಬೆಳೆಯುತ್ತಿದ್ದರು ಎಂಬುದನ್ನು ಸಾಬೀತುಪಡಿಸುವಲ್ಲಿ ತನಿಖಾಧಿಕಾರಿ ಯಾವುದೇ ಸಾಕ್ಷ್ಯ ಒದಗಿಸಿಲ್ಲ. ಹೀಗಾಗಿ, ದೋಷಾರೋಪ ಪಟ್ಟಿಯು ಕಾನೂನಿಗೆ ವಿರುದ್ಧವಾಗಿದೆ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಪ್ರಕರಣವನ್ನು ರದ್ದುಗೊಳಿಸಿದೆ. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಜಯಶ್ಯಾಮ್‌ ಜಯಸಿಂಹ ರಾವ್‌ ವಾದ ಮಂಡಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.