ಸಾಂದರ್ಭಿಕ ಚಿತ್ರ
ಬೆಂಗಳೂರು: ‘ಪ್ರಾಂಶುಪಾಲರಿಗೆ ನೀಡಿದ್ದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಸ್ ಪಡೆದ ಸರ್ಕಾರ, ಅದನ್ನು ವಿರೋಧಿಸಿ ಪ್ರತಿಭಟಿಸಿದ ಶಿಕ್ಷಕರ ಮೇಲೆ ಕೇಸ್ ದಾಖಲಿಸಿ ಬೆದರಿಸುವ ತಂತ್ರ ಬಳಸುತ್ತಿದೆ’ ಎಂದು ಬಿಜೆಪಿ ಟೀಕಿಸಿದೆ.
‘ಶಿಕ್ಷಕರ ಪರವಾಗಿ ಬೆಂಬಲಿಸಿ ಪ್ರತಿಭಟನೆ ನಡೆಸಿದ್ದ ಉಡುಪಿಯ ಶಾಸಕ ಯಶಪಾಲ್ ಸುವರ್ಣ ಮತ್ತು ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧವೂ ಎಫ್‌ಐಆರ್ ದಾಖಲಿಸಿ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ’ ಎಂದು ಬಿಜೆಪಿ ‘ಎಕ್ಸ್’ನಲ್ಲಿ ಹೇಳಿದೆ.
‘ಅಭಿವ್ಯಕ್ತಿ ಸ್ವಾತಂತ್ರ್ಯ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುತ್ತೇವೆ ಎನ್ನುವ ಕಾಂಗ್ರೆಸ್ ಮಾತುಗಳೆಲ್ಲ ಕೇವಲ ಬೊಗಳೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಒಂದು ಪ್ರತಿಭಟನೆಯನ್ನೂ ಸಹಿಸಿಕೊಳ್ಳಲು ಆಗದ ನಿರಂಕುಶವಾದಿ ಮನಸ್ಥಿತಿ ಹೊಂದಿರುವುದು ಅವರು ಕುಳಿತ ಸ್ಥಾನದ ಘನತೆಗೆ ಕುಂದು’ ಎಂದು ಬಿಜೆಪಿ ಕಿಡಿ ಕಾರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.