ADVERTISEMENT

’ಸುಳ್ಳು ಜಾತಿ ಪ್ರಮಾಣಪತ್ರ: ಸುಳ್ಳು ಮಾಹಿತಿ’

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2023, 20:42 IST
Last Updated 4 ಅಕ್ಟೋಬರ್ 2023, 20:42 IST
ನ್ಯಾಯಾಲಯ (ಪ್ರಾತಿನಿಧಿಕ ಚಿತ್ರ)
ನ್ಯಾಯಾಲಯ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ‘ಬೇಡ ಜಂಗಮ ಜಾತಿಯು ವೀರಶೈವ ಲಿಂಗಾಯತ ಪಂಥದಲ್ಲಿಯೇ ಬರುವ ಜಾತಿ ಆಗಿದೆಯೆಂದು ವಿವಿಧ ವರದಿಗಳು ಮತ್ತು ಹೈಕೋರ್ಟಿನ ತೀರ್ಪು ಉಲ್ಲಂಘಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ನನ್ನ ಮತ್ತು ನನ್ನ ಸಹೋದರರ ಜಾತಿ ಪ್ರಮಾಣಪತ್ರಗಳನ್ನು ರದ್ದುಪಡಿಸಿದ್ದಾರೆ’ ಎಂದು ಎಂ.ಪಿ. ದಾರಕೇಶ್ವರಯ್ಯ ಹೇಳಿದ್ದಾರೆ.

‘ಜಿಲ್ಲಾಧಿಕಾರಿಯವರ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆವರೆಗೆ ಯಾವುದೇ ಪ್ರತಿಕ್ರಿಯೆ ನೀಡಬಾರದೆಂದು ಸ್ಪಷ್ಟವಾಗಿ ಹೇಳಿದೆ. ಆದರೂ, ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವವವರ ಮೇಲೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿ ತೆಗೆದುಕೊಂಡಿರುವ ಕ್ರಮದ ಕುರಿತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಮೂಲಕ ಜಿಲ್ಲಾಧಿಕಾರಿ‌ ಮಾಹಿತಿ ಕೇಳಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಕುಲಶಾಸ್ತ್ರ ಅಧ್ಯಯನ, ಕೆ.ಎಸ್‌. ಸಿಂಗ್‌ ವರದಿ, ಸೂರ್ಯನಾಥ ಕಾಮತ್‌ ವರದಿ ಪ್ರಕಾರ ಬೇಡ ಜಂಗಮ ಜಾತಿ ವೀರಶೈವ ಲಿಂಗಾಯತ ಪಂಥದಲ್ಲಿಯೇ ಬರುವ ಜಾತಿ ಆಗಿದೆಯೆಂದು 2022ರ ಏಪ್ರಿಲ್‌ 20ರಂದು ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ವರದಿ ನೀಡಲಾಗಿದೆ’ ಎಂದೂ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.