ADVERTISEMENT

ಕಾಂಗ್ರೆಸ್‌ನಲ್ಲಿ ಸಿದ್ದು, ಡಿಕೆಶಿ ಜಾತಿ ಗಣತಿ ಎಂಬುದು ಪ್ರತ್ಯೇಕವೇ?: ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಸೆಪ್ಟೆಂಬರ್ 2021, 10:04 IST
Last Updated 11 ಸೆಪ್ಟೆಂಬರ್ 2021, 10:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಜಾತಿ ಗಣತಿಹಾಗೂ ಡಿ.ಕೆ.ಶಿವಕುಮಾರ್ ಅವರ ಜಾತಿ ಗಣತಿ ಎಂಬುದು ಪ್ರತ್ಯೇಕವಾಗಿದೆಯೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಜಾತಿ ಗಣತಿ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ ಅವರ ಕಾಂಗ್ರೆಸ್ ಪ್ರವೇಶ ಇದನ್ನೇ ಸೂಚಿಸುತ್ತಿದೆಯಲ್ಲವೇ?’ ಎಂದು ಪ್ರಶ್ನಿಸಿದೆ.

‘ಜಾತಿ ಗಣತಿ ಜಾರಿಗೆ ಕಾಂಗ್ರೆಸ್ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದರು ಎಂಬುದಕ್ಕೆ ಸಾಕ್ಷ್ಯ ಕೊಡಿ ಎಂದಿದ್ದ ಸಿದ್ದರಾಮಯ್ಯನವರೇ, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?, ಜಾತಿಗಣತಿ ವಿಚಾರದಲ್ಲಿ ಪಕ್ಷದ ನಿಲುವು ಸ್ಪಷ್ಟಪಡಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಮಿತಿ ರಚಿಸಿರುವ ಸುದ್ದಿಯನ್ನು ಹೇಗೆ ಸ್ವೀಕರಿಸುತ್ತೀರಿ?’ ಎಂದು ಬಿಜೆಪಿ ಪ್ರಶ್ನಿಸಿದೆ.

ADVERTISEMENT

ಚುನಾವಣೆ ಬಂದಾಗ ಯಾವುದೋ ಒಂದು ವಿಷಯವನ್ನು ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ? ಎಂದು ಇತ್ತೀಚೆಗೆ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.