ADVERTISEMENT

ಶೈಕ್ಷಣಿಕ, ಸಾಮಾಜಿಕ ಗಣತಿ ಮುಂದೂಡಿಕೆ ಇಲ್ಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 11:37 IST
Last Updated 19 ಸೆಪ್ಟೆಂಬರ್ 2025, 11:37 IST
<div class="paragraphs"><p>ಸಿದ್ದರಾಮಯ್ಯ&nbsp;, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ , ಮುಖ್ಯಮಂತ್ರಿ

   

ಬೆಂಗಳೂರು: ಕರ್ನಾಟಕ ಸರ್ಕಾರವು ಈಗಾಗಲೇ ಪ್ರಕಟಿಸಿರುವಂತೆಯೇ ಸೆ.22ರಿಂದಲೇ  ಶೈಕ್ಷಣಿಕ , ಸಾಮಾಜಿಕ ಸಮೀಕ್ಷೆ ಆರಂಭವಾಗಲಿದ್ದು, ಸಮೀಕ್ಷೆ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯ ಬಗ್ಗೆ ಸರ್ಕಾರದ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರವನ್ನು ಆಯೋಗವೇ ಕೈಗೊಳ್ಳಲಿದೆ ಎಂದು ಹೇಳಿದರು.

ADVERTISEMENT

ಬಿಜೆಪಿಯವರು ಗಣತಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸುವಂತೆ ಎಲ್ಲ ಸಚಿವರಿಗೂ ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.