ಮಲ್ಲಿಕಾರ್ಜುನ ಖರ್ಗೆ
– ಪಿಟಿಐ ಚಿತ್ರ
ಬೆಂಗಳೂರು: ‘ಸರಿಯಾದ ಸಿದ್ಧತೆ ಮಾಡಿಕೊಳ್ಳದೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗಿದೆ. ಹೀಗಾಗಿ, ಮೂರು ತಿಂಗಳ ಅವಧಿಗೆ ಮುಂದೂಡಬೇಕು’ ಎಂದು ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿ ಮನವಿ ಸಲ್ಲಿಸಿದೆ.
ಸದಾಶಿವನಗರದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿದ ಒಕ್ಕಲಿಗ ನಾಯಕರು, ಸಮೀಕ್ಷೆ ಮುಂದೂಡುವಂತೆ ಆಗ್ರಹಿಸಿದರು. ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿಲ್ಲ. ಆ್ಯಪ್‌ನಲ್ಲಿ ಮಾಹಿತಿ ಅಪ್ ಲೋಡ್ ಆಗುತ್ತಿಲ್ಲ ಎಂದು ದೂರಿದರು.
ಖರ್ಗೆ ಅವರ ಭೇಟಿ ಬಳಿಕ ಮಾತನಾಡಿದ ರಾಜ್ಯ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಅಡಿಟರ್ ನಾಗರಾಜ್ ಯಲಚವಾಡಿ, ‘ಸಮೀಕ್ಷೆ ಮುಂದೂಡುವಂತೆ ಒಕ್ಕಲಿಗ ಸಮುದಾಯದ ಸಭೆಯಲ್ಲೂ ಮನವಿ ಮಾಡಲಾಗಿತ್ತು. ಆ ವಿಚಾರವನ್ನು ಖರ್ಗೆಯವರ ಗಮನಕ್ಕೆ ತರಲಾಗಿದೆ. ಸಮೀಕ್ಷೆಯನ್ನು ಮುಂದೂಡಲೇಬೇಕೆಂದು ಮನವಿ ಮಾಡಿದ್ದೇವೆ. ಪರಿಶೀಲಿಸುವುದಾಗಿ ಅವರು ತಿಳಿಸಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.