ADVERTISEMENT

ಜಾತಿ ಗಣತಿ ಮರು ಸಮೀಕ್ಷೆ | ಸಂಪುಟ ಸಭೆಯಲ್ಲಿ ಚರ್ಚೆ: ತಂಗಡಗಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 15:52 IST
Last Updated 11 ಜೂನ್ 2025, 15:52 IST
<div class="paragraphs"><p>ಶಿವರಾಜ್ ತಂಗಡಗಿ</p></div>

ಶಿವರಾಜ್ ತಂಗಡಗಿ

   

ಬೆಂಗಳೂರು: ‘ಗುರುವಾರ (ಜೂನ್‌ 12) ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆಯ ಕುರಿತು ವಿಸ್ತೃತವಾದ ಚರ್ಚೆ ನಡೆಯಲಿದೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಕಾಂತರಾಜ ನೇತೃತ್ವದ ಆಯೋಗ ನಡೆಸಿದ್ದ ಸಮೀಕ್ಷೆಯ ದತ್ತಾಂಶಗಳ ಬಗ್ಗೆಯೂ ಚರ್ಚೆಯಾಗಲಿದೆ. ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಹೇಳಿದ್ದನ್ನು ಪಾಲಿಸಬೇಕಿದೆ’ ಎಂದರು.

ADVERTISEMENT

‘ಈಗಾಗಲೇ ನಡೆಸಿರುವ ಸಮೀಕ್ಷೆಯ ಬಗ್ಗೆ ಈ ಹಿಂದಿನ ಮೂರು ಸಚಿವ ಸಂಪುಟ ಸಭೆಗಳಲ್ಲಿ ಚರ್ಚೆ ನಡೆದಿದೆ. ಎಲ್ಲ ಸಚಿವರು ತಮ್ಮ ಸಲಹೆ ನೀಡಿದ್ದಾರೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

‘ಜಾತಿ ಗಣತಿ ಹಾಗೂ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ಎಂದು ಹೈಕಮಾಂಡ್ ಬಹಳ‌ ಸ್ಪಷ್ಟವಾಗಿ ಹೇಳಿದೆ. ಈ ವಿಷಯದಲ್ಲಿ ಚರ್ಚೆ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.