ಡಿ.ಕೆ ಶಿವಕುಮಾರ್
- ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಜಾತಿ ಗಣತಿಯು ಜನಗಣತಿಯಲ್ಲ. ಅದು ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ. ಮುಖ್ಯಮಂತ್ರಿ ಮತ್ತು ನಾನು ಇನ್ನೂ ಆ ವರದಿಯನ್ನು ನೋಡಿಲ್ಲ. ನಾವು ಅದನ್ನು ಪರಿಶೀಲಿಸುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
‘ಜಾತಿ ಗಣತಿ ವರದಿ ವಿಚಾರದಲ್ಲಿ ನಿಮ್ಮ ನಿಲುವೇನು’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ಪಕ್ಷ ಸರ್ವರಿಗೂ ಸಮಬಾಳು, ಸಮಪಾಲು ಎಂಬ ನಿಲುವು ಹೊಂದಿದೆ. ಸಮೀಕ್ಷೆಯ ವರದಿಯಲ್ಲಿ ಏನಾದರೂ ಹೆಚ್ಚು ಕಮ್ಮಿ ಇದ್ದರೆ ಎಲ್ಲರೂ ಚರ್ಚೆ ಮಾಡಿ ಸರಿಪಡಿಸುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.