ಎಂ.ಬಿ. ಪಾಟೀಲ
– ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಜಾತಿವಾರು ಸಮೀಕ್ಷೆಯ ವೇಳೆ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತರು ಏನು ಬರೆಯಬೇಕೆಂಬ ವಿಚಾರದಲ್ಲಿ ಬಿಜೆಪಿಯವರದ್ದು ಒಂದು ಅಭಿಪ್ರಾಯ, ವೀರಶೈವ ಮಹಾಸಭಾದವರದ್ದು ಮತ್ತೊಂದು ಅಭಿಪ್ರಾಯವಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತರು ಹಿಂದೂ ಎಂದೇ ಬರೆಯಿಸಬೇಕೆಂಬ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಸುದ್ದಿಗಾರರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಅವರು, ‘ಈ ವಿಷಯದ ಬಗ್ಗೆ ಚರ್ಚೆ ಮಾಡೋಣ’ ಎಂದರು.
‘ಯಡಿಯೂರಪ್ಪ ಅವರ ಮಗಳೇ ವೀರಶೈವ ಮಹಾಸಭಾ ಮಹಿಳಾ ಘಟಕದ ಅಧ್ಯಕ್ಷರಾಗಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಯಡಿಯೂರಪ್ಪ ಅವರೂ ಭಾಗಿಯಾಗಿದ್ದರು. ಅಲ್ಲಿ ನಿರ್ಣಯ ಅಂಗೀಕರಿಸಿದಾಗ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಕೂಡಾ ಇದ್ದರು’ ಎಂದರು.
‘ಈ ವಿಚಾರದಲ್ಲಿ ಬಿಜೆಪಿಯವರು ದ್ವಿಪಾತ್ರ ಮಾಡುತ್ತಿದ್ದಾರೆ’ ಎಂದೂ ತಿರುಗೇಟು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.