ADVERTISEMENT

ಸಮೀಕ್ಷೆ ವೇಳೆ ವೈಯಕ್ತಿಕ ಮಾಹಿತಿ ಕೇಳಲು ಹೋಗಬೇಡಿ: ಡಿಕೆಶಿ ಸಲಹೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 14:02 IST
Last Updated 5 ಅಕ್ಟೋಬರ್ 2025, 14:02 IST
<div class="paragraphs"><p>ಡಿಕೆಶಿ </p></div>

ಡಿಕೆಶಿ

   

ಬೆಂಗಳೂರು: ‘ನಾಗರಿಕರ ಬಳಿ ಕೋಳಿ, ಕುರಿ, ಒಡವೆ, ವಾಷಿಂಗ್ ಮಷೀನ್, ಫ್ರಿಜ್ಡ್ ಹೀಗೆ ವೈಯಕ್ತಿಕ ಮಾಹಿತಿಗಳನ್ನು ಕೇಳಲು ಹೋಗಬೇಡಿ’ ಎಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನಿಡಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಸಮೀಕ್ಷಕರು ಏನು ಮಾಡುತ್ತಾರೊ ಗೊತ್ತಿಲ್ಲ’ ಎಂದರು.

ADVERTISEMENT

‘ಯಾರು ಏನೇ ಆಕ್ಷೇಪ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ’ ಎಂದರು.

‘ಈ ಹಿಂದಿನ ಸಮೀಕ್ಷೆ ಸರಿಯಿಲ್ಲ ಎಂಬ ಕಾರಣಕ್ಕೆ ಹೊಸದಾಗಿ ಸಮೀಕ್ಷೆ ಮಾಡಲಾಗುತ್ತಿದೆ. ಎಲ್ಲರೂ ಸಹಕರಿಸಬೇಕು’ ಎಂದೂ ಅವರು ಮನವಿ ಮಾಡಿದರು.

ಎರಡು ಮೂರು ದಿನಗಳಲ್ಲಿ ಸಮೀಕ್ಷೆ ಮುಗಿಯಬಹುದೇ’ ಎಂಬ ಪ್ರಶ್ನೆಗೆ, ‘ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದವರು ಯೋಚನೆ ಮಾಡುತ್ತಾರೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.