ಜಾತಿ ಗಣತಿ
ಬೆಂಗಳೂರು: ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಸಮೀಕ್ಷೆ) ಸೋಮವಾರ ( ಸೆ. 22) ಆರಂಭವಾಗಿದ್ದು, ಎರಡು ದಿನಗಳಲ್ಲಿ ಒಟ್ಟು 71,004 ಜನರಿಂದ ದತ್ತಾಂಶ ಸಂಗ್ರಹಿಸಲಾಗಿದೆ.
ಸಮೀಕ್ಷೆಯ ಎರಡನೇ ದಿನವಾದ ಮಂಗಳವಾರದ ಅಂತ್ಯಕ್ಕೆ 18,487 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ.
ಈ ಎರಡು ದಿನಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು 2,783 ಮನೆಗಳಿಂದ ಒಟ್ಟು 10,820 ಜನರ ಹಾಗೂ ತುಮಕೂರು ಜಿಲ್ಲೆಯಲ್ಲಿ ಅತೀ ಕಡಿಮೆ ಏಳು ಮನೆಗಳಿಂದ 21 ಜನರ ದತ್ತಾಂಶವನ್ನು ಮೊಬೈಲ್ ಆ್ಯಪ್ ನಲ್ಲಿ ದಾಖಲಿಸಿಕೊಳ್ಳಲಾಗಿದೆ.
ಈವರೆಗೆ ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಗದಗ, ಮಂಡ್ಯ ಜಿಲ್ಲೆಯಲ್ಲಿ ತಲಾ 1,000 ಕ್ಕಿಂತ ಹೆಚ್ಚು ಮನೆಗಳಿಂದ ಹಾಗೂ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಉಡುಪಿ ಜಿಲ್ಲೆಗಳಲ್ಲಿ ತಲಾ 100ಕ್ಕಿಂತಲೂ ಕಡಿಮೆ ಮನೆಗಳಿಂದ ದತ್ತಾಂಶ ಸಂಗ್ರಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.