ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್
ರಾಮನಗರ: ‘ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಎದುರಾಗಿರುವ ಕೆಲ ಗೊಂದಲಗಳನ್ನು ಸರಿಪಡಿಸಿಯೇ ಸಮೀಕ್ಷೆ ನಡೆಸುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.
ನಗರದಲ್ಲಿ ಶುಕ್ರವಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ವರ್ಣಮಾಲೆ ಆಧಾರದ ಮೇಲೆ ಜಾತಿಗಳನ್ನು ಪಟ್ಟಿ ಮಾಡಲಾಗಿದೆ. ಪ್ರತಿ ಮನೆ ಮನೆಗೆ ಹೋಗಿ ಎಲ್ಲರ ಮಾಹಿತಿ ಸಂಗ್ರಹಿಸುತ್ತೇವೆ’ ಎಂದರು.
'ಬಿಜೆಪಿ ಮತ್ತು ದಳದವರು ಷಡ್ಯಂತ್ರ ರೂಪಿಸಿ ಸಮೀಕ್ಷೆ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಗೊಂದಲಕ್ಕೆ ಆಸ್ಪದವಿಲ್ಲದಂತೆ ನಾವು ಸಮೀಕ್ಷೆ ನಡೆಸಿ, ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುತ್ತೇವೆ’ ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.