ಒಳ ಮೀಸಲಾತಿ
ಬೆಂಗಳೂರು: ಒಳ ಮೀಸಲಾತಿ ಸಂಬಂಧಿಸಿದಂತೆ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆ ಶೇ 73ರಷ್ಟು ಪೂರ್ಣಗೊಂಡಿದೆ ಎಂದು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ತಿಳಿಸಿದರು.
ಸುದ್ದಿ ಗೋಷ್ಟಿಯಲ್ಲಿ ಈ ಕುರಿತು ವಿವರ ನೀಡಿದ ಅವರು, ಹಲವು ಶಾಸಕರು, ಸಂಘಸಂಸ್ಥೆಗಳ ಮನವಿಯ ಮೇರೆಗೆ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಮನೆ ಮನೆ ಭೇಟಿ ನೀಡಿ ಸಮೀಕ್ಷೆ ದಿನಾಂಕವನ್ನು ಇದೇ 25 ರವರೆಗೆ, ವಿಶೇಷ ಶಿಬಿರವನ್ನು ಇದೇ 26 ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಇದೇ 28 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ36 ರಷ್ಟು ಮಾತ್ರ ಸಮೀಕ್ಷೆ ನಡೆದಿದೆ. ಅಪಾರ್ಟ್ ಮೆಂಟ್ ಗಳಲ್ಲಿ ಸಮೀಕ್ಷೆಗೆ ಹೋದವರಿಗೆ ತೊಂದರೆ ಮಾಡಿದರೆ, ವಿದ್ಯುತ್ ಮತ್ತು ನೀರಿನ ಸಂಪರ್ಕ ವನ್ನು ಕಡಿತ ಮಾಡಲಾಗುವುದು ಎಂದೂ ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.