ADVERTISEMENT

ಬೆಂಗಳೂರು | ಸಮೀಕ್ಷೆಗೆ ಆಕ್ಷೇಪ: ಬುಧವಾರ ಮತ್ತೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 16:11 IST
Last Updated 23 ಸೆಪ್ಟೆಂಬರ್ 2025, 16:11 IST
   

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಶ್ನಿಸಲಾದ ಅರ್ಜಿಗಳ ಕುರಿತ ಸುದೀರ್ಘ ವಿಚಾರಣೆ ಮಂಗಳವಾರ ಮೊಟಕುಗೊಂಡಿದ್ದು, ಬುಧವಾರ ಮತ್ತೆ ನಡೆಯಲಿದೆ. 

ಸರ್ಕಾರದ ನಡೆಯನ್ನು ಪ್ರಶ್ನಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್. ರಘುನಾಥ್‌, ಅಖಿಲ ಭಾರತ ವೀರಶೈವ ಮಹಾಸಭೆಯ ಬಿ.ಆರ್.ಉದಯಶಂಕರ್‌ ಸೇರಿದಂತೆ 9 ಜನರು, ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿ ಕೆ.ಎನ್‌.ಸುಬ್ಬಾರೆಡ್ಡಿ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ನಡೆಸಿತು.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲರಾದ ಪ್ರಭುಲಿಂಗ ಕೆ.ನಾವದಗಿ, ಅಶೋಕ ಹಾರನಹಳ್ಳಿ, ಜಯಕುಮಾರ್ ಎಸ್‌.ಪಾಟೀಲ್, ವಿವೇಕ್ ರೆಡ್ಡಿ, ಎಸ್‌.ಶ್ರೀರಂಗ ಮತ್ತು ಎಸ್‌.ಎಂ.ಚಂದ್ರಶೇಖರ್ ಮಂಡಿಸಿದ ವಿಸ್ತೃತ ವಾದವನ್ನು ನ್ಯಾಯಪೀಠ ಆಲಿಸಿತು. ಪ್ರತಿಯಾಗಿ ರಾಜ್ಯ ಸರ್ಕಾರದ ಪರ ಸುಪ್ರೀಂ ಕೋರ್ಟ್‌ನ ಪದಾಂಕಿತ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು ತಮ್ಮ ವಾದ ಪೂರ್ಣಗೊಳಿಸಲು ಸಮಯದ ಕೊರತೆಯಾದ ಕಾರಣ ನ್ಯಾಯಪೀಠ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.