ADVERTISEMENT

ಸಮೀಕ್ಷೆ: ‘ಶಿವಾರ್ಚಕ’ ಎಂದೇ ನಮೂದಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 23:43 IST
Last Updated 22 ಸೆಪ್ಟೆಂಬರ್ 2025, 23:43 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಸಮೀಕ್ಷೆ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಹಾಗೂ ಜಾತಿಯ ಕಾಲಂನಲ್ಲಿ ‘ಶಿವಾರ್ಚಕ’ ಎಂದೇ ನಮೂದಿಸಬೇಕು ಎಂದು ಬೆಂಗಳೂರು ಶಿವಾರ್ಚಕ ಕ್ಷೇಮಾಭಿವೃದ್ಧಿ ಟ್ರಸ್ಟ್‌ ತಿಳಿಸಿದೆ. 

ADVERTISEMENT

ಜಾತಿ ಕಾಲಂನ ಕ್ರಮ ಸಂಖ್ಯೆ ಎ–1320 ಅಡಿಯಲ್ಲಿ ಶಿವಾರ್ಚಕ ಎಂದೇ ಬರೆಯಿಸಬೇಕು. ಇದರಿಂದ ಸಮುದಾಯದ ನಿಖರ ಜನಸಂಖ್ಯೆ ತಿಳಿಯಲಿದೆ. ಇದು ಮುಂದಿನ ದಿನಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಸಮುದಾಯದವರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಟ್ರಸ್ಟ್‌ನ ಅಧ್ಯಕ್ಷ ಪುಟ್ಟಬಸಪ್ಪ, ಪ್ರಧಾನ ಕಾರ್ಯದರ್ಶಿ ಸಿ. ಗೋಪಾಲ್ ಹಾಗೂ ಖಜಾಂಚಿ ಮಹೇಶ್ ಅವರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.