ಡಿ.ಕೆ ಶಿವಕುಮಾರ್
- ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟಿಸ್‌ಗೆ ಕಾನೂನು ಮೂಲಕವೇ ಸರ್ಕಾರ ಉತ್ತರ ನೀಡಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
‘ಕಾವೇರಿ ಆರತಿ’ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೋಟಿಸ್ ನೀಡಿರುವ ಬಗ್ಗೆ ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಪೂಜೆ, ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ‘ಕಾವೇರಿ ಆರತಿ’ ನಡೆಯಬಹುದೇ ಎಂಬ ಬಗ್ಗೆ ಕೆಲವರಿಗೆ ಆತಂಕ ಇದೆ. ಅದನ್ನು ಸರ್ಕಾರ ನಿವಾರಿಸಲಿದೆ’ ಎಂದರು.
‘ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ’ ಎಂದೂ ಹೇಳಿದರು.
ನಾನು ಭವಿಷ್ಯ ಕೇಳುವೆ: ‘ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿ’ದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ಅಶೋಕ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರೆಯೇ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ’ ಎಂದು ಛೇಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.