ADVERTISEMENT

ಕಾವೇರಿ ಆರತಿ ಕಾರ್ಯಕ್ರಮಕ್ಕೆ ವಾರದಲ್ಲಿ ನೀಲನಕ್ಷೆ ಸಿದ್ಧ: ಡಿ.ಕೆ. ಶಿವಕುಮಾರ್

ಕೆಆರ್‌ಎಸ್‌ ಬೃಂದಾವನ ಉದ್ಯಾನದಲ್ಲಿ ಸ್ಥಳ ಪರಿಶೀಲಿಸಿದ ಉಪಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2025, 12:26 IST
Last Updated 25 ಏಪ್ರಿಲ್ 2025, 12:26 IST
<div class="paragraphs"><p>ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯ ಸಮೀಪ ‘ಕಾವೇರಿ ಆರತಿ’ ನಡೆಸುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಶುಕ್ರವಾರ ಸ್ಥಳ ಪರಿಶೀಲಿಸಿದರು. ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಮತ್ತು ಎಂಜಿನಿಯರ್‌ಗಳು ಪಾಲ್ಗೊಂಡಿದ್ದರು</p></div>

ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯ ಸಮೀಪ ‘ಕಾವೇರಿ ಆರತಿ’ ನಡೆಸುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಶುಕ್ರವಾರ ಸ್ಥಳ ಪರಿಶೀಲಿಸಿದರು. ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಮತ್ತು ಎಂಜಿನಿಯರ್‌ಗಳು ಪಾಲ್ಗೊಂಡಿದ್ದರು

   

ಮಂಡ್ಯ: ‘ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಎನ್‌.ಚಲುವರಾಯಸ್ವಾಮಿ ನೇತೃತ್ವದ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್‌.ಎಸ್‌ ಬೃಂದಾವನ ಉದ್ಯಾನದ ಅಣೆಕಟ್ಟೆ ಸಮೀಪ ‘ಕಾವೇರಿ ಆರತಿ’ ನಡೆಸುವ ಸಂಬಂಧ ಶುಕ್ರವಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

‘ಈ ಕಾವೇರಿ ಆರತಿಗೆ ಸರ್ಕಾರ ₹92 ಕೋಟಿ ನೀಡಲು ತೀರ್ಮಾನಿಸಿದ್ದು, ಇದರ ಜತೆಗೆ ಬೇರೆ ಇಲಾಖೆಗಳು ಅಗತ್ಯ ಸಹಕಾರ ನೀಡಲಿವೆ. ಕನಿಷ್ಠ ಸುಮಾರು 10 ಸಾವಿರ ಮಂದಿ ಕುಳಿತು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗುವುದು. ಎಷ್ಟು ದಿನ ಕಾರ್ಯಕ್ರಮ ಮಾಡಬೇಕು ಎಂಬುದನ್ನು ಸಮಿತಿ ತೀರ್ಮಾನ ಮಾಡಲಿದೆ ಎಂದರು.

ಬೃಂದಾವನ ಉನ್ನತೀಕರಣ:

‘ಬೃಂದಾವನ ಉದ್ಯಾನ‌ ಉನ್ನತೀಕರಣಕ್ಕಾಗಿ (ಅಮ್ಯೂಸ್‌ಮೆಂಟ್‌ ಪಾರ್ಕ್‌) ನಾನು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅಲ್ಲಿ ಯೋಜನಾ ಪ್ರಾಧಿಕಾರ ಮಾಡಲು ತೀರ್ಮಾನಿಸಲಾಗಿದೆ. ನಾಲ್ಕು ಪಂಚಾಯ್ತಿ ಸೇರಿಸಲಾಗುತ್ತಿದೆ. ಪಂಚಾಯ್ತಿಗಳ ಅಸ್ಥಿತ್ವಕ್ಕೆ ತೊಂದರೆ ಆಗುವುದಿಲ್ಲ. ಅವರ ಅಧಿಕಾರ ಮೊಟಕುಗೊಳಿಸುವುದಿಲ್ಲ’ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

‘ಬೃಂದಾವನ ಉದ್ಯಾನ ಉನ್ನತೀಕರಣಕ್ಕೆ 7 ಸಂಸ್ಥೆಗಳಿಂದ ಅರ್ಜಿ ಬಂದಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯದಲ್ಲೇ ಇದರ ರೂಪುರೇಷೆ ಸಿದ್ಧಪಡಿಸಲಾಗುವುದು. ಈ ಭಾಗದಲ್ಲಿ ಏನೇ ಉದ್ಯೋಗ ಸೃಷ್ಟಿಯಾದರೂ ಈ ಭಾಗದ ಪಂಚಾಯ್ತಿ ವ್ಯಾಪ್ತಿಯ ಜನರಿಗೆ ಮೊದಲು ಆದ್ಯತೆ ನೀಡಲು ಷರತ್ತು ಹಾಕಲಾಗಿದೆ. ಸ್ಥಳೀಯ ಯುವಕರಿಗೆ ಈ ಸಂಸ್ಥೆಗಳು ತರಬೇತಿ ನೀಡಿ ಉದ್ಯೋಗ ನೀಡಬೇಕು ಎಂದು ಸೂಚಿಸಲಾಗಿದೆ” ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.