ADVERTISEMENT

ಕಾವೇರಿ ಆರತಿ: ಹೈಕೋರ್ಟ್‌ ಷರತ್ತುಬದ್ಧ ಅನುಮತಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2025, 16:03 IST
Last Updated 20 ಮಾರ್ಚ್ 2025, 16:03 IST
<div class="paragraphs"><p>ಹೈಕೋರ್ಟ್‌</p></div>

ಹೈಕೋರ್ಟ್‌

   

ಬೆಂಗಳೂರು: ಸ್ಯಾಂಕಿ ಕೆರೆಯ ಬಫರ್‌ ವಲಯದಲ್ಲಿ ಇದೇ 21ಕ್ಕೆ ಆಯೋಜಿಸಲಾಗಿರುವ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಹೈಕೋರ್ಟ್‌, ಬೆಂಗಳೂರು ಜಲಮಂಡಳಿಗೆ ಷರತ್ತುಬದ್ಧ ಅನುಮತಿ ನೀಡಿದೆ.

‘ಕಾವೇರಿ ಆರತಿ’ ಆಕ್ಷೇಪಿಸಿ ಹೈಕೋರ್ಟ್‌ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ADVERTISEMENT

‘ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಯ ನಿಯಮಗಳು ಉಲ್ಲಂಘನೆಯಾಗದಂತೆ ಕಾವೇರಿ ಆರತಿ ಕಾರ್ಯಕ್ರಮ ನಡೆಸಬೇಕು. ಕಾನೂನು ಮತ್ತು ಸಾರ್ವಜನಿಕ ಸುವ್ಯವಸ್ಥೆ ಕಾಪಾಡಬೇಕು. ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು’ ಎಂದು ರಾಜ್ಯ ಸರ್ಕಾರ ಮತ್ತು ಜಲಮಂಡಳಿಗೆ ನಿರ್ದೇಶಿಸಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.