ADVERTISEMENT

‘ತಮಿಳುನಾಡಿಗೆ ಕೊಡಲು ನೀರಿಲ್ಲ’

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 20:43 IST
Last Updated 3 ಜೂನ್ 2019, 20:43 IST

ಬೆಂಗಳೂರು: ‘ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರು ಇಲ್ಲ, ಈಗ ಸಂಕಷ್ಟ ಸೂತ್ರ ಪಾಲಿಸದೇ ಬೇರೆ ದಾರಿ ಇಲ್ಲ’ ಎಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.

‘ರಾಜ್ಯದ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಒಟ್ಟು 13.93 ಟಿಎಂಸಿ ಅಡಿ ನೀರಿನ ಸಂಗ್ರಹಿವಿದೆ. ತಮಿಳುನಾಡಿಗೆ 9.2 ಟಿಎಂಸಿ ಅಡಿ ನೀರು ಬಿಡಲು ಪ್ರಾಧಿಕಾರ ಸೂಚಿ ಸಿದೆ. ಆದರೆ, ಆದೇಶ ಪಾಲಿಸುವ ಸ್ಥಿತಿಯಲ್ಲಿಲ್ಲ ಎಂದು ಅವರಿಗೆ ತಿಳಿಸಿದ್ದೇವೆ’ ಎಂದರು.

‘ನಮ್ಮ ರಾಜ್ಯದ ಪರಿಸ್ಥಿತಿಯನ್ನು ತಮಿಳುನಾಡು ಮತ್ತು ಪ್ರಾಧಿಕಾರ ಅರ್ಥ ಮಾಡಿಕೊಳ್ಳುತ್ತದೆ ಎಂಬ ವಿಶ್ವಾಸವಿದೆ’ ಎಂದೂ ಹೇಳಿದರು.

ADVERTISEMENT

‘ಉತ್ತರ ಕರ್ನಾಟಕ ಭಾಗಕ್ಕೆ ನೀರು ಪಡೆಯಲು ಮಹಾರಾಷ್ಟ್ರದ ಜತೆ ಮಾತುಕತೆ ನಡೆಸಿದ್ದು, ನಾಲ್ಕು ಟಿಎಂಸಿ ಅಡಿ ನೀರು ಬಿಡಲು ಒಪ್ಪಿದೆ. ಇದಕ್ಕೆ ಪರ್ಯಾಯವಾಗಿ ನಾವು ಮಹಾರಾಷ್ಟ್ರಕ್ಕೆ ನಾಲ್ಕು ಟಿಎಂಸಿ ಅಡಿ ನೀರು ಕೊಡುತ್ತೇವೆ. ಈ ಸಂಬಂಧ ಒಪ್ಪಂದ ಮಾಡಿಕೊಳ್ಳುತ್ತೇವೆ’ ಎಂದರು.

‘ಈಗ ನಮಗೆ ಮಳೆಗಾಗಿ ಪ್ರಾರ್ಥನೆ ಸಲ್ಲಿಸುವುದನ್ನು ಬಿಟ್ಟು ಬೇರೆ ದಾರಿ ಇಲ್ಲ. ಇದೇ 6ರಂದು ಶೃಂಗೇರಿ ಸಮೀಪದ ಕಿಗ್ಗಾದ ಋಷ್ಯಶೃಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು’ ಎಂದು ಶಿವಕುಮಾರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.