ADVERTISEMENT

ಡಿಎಂಕೆ ಓಲೈಕೆಗೆ ಕಾವೇರಿ ನೀರು, ಸರ್ವಪಕ್ಷ ಸಭೆ ಬಹಿಷ್ಕರಿಸುವುದಿಲ್ಲ: ಆರ್‌.ಅಶೋಕ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2023, 23:30 IST
Last Updated 21 ಆಗಸ್ಟ್ 2023, 23:30 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ತಮಿಳುನಾಡು ಸರ್ಕಾರ, ಸೋನಿಯಾಗಾಂಧಿ, ರಾಹುಲ್‌ ಗಾಂಧಿ ಪ್ರೀತಿ ಸಂಪಾದಿಸುವ ಸಲುವಾಗಿ ಕಾಂಗ್ರೆಸ್‌ನವರು ನಮ್ಮ ಬೆಳೆಗಳು ಮತ್ತು ಬೆಂಗಳೂರಿನ ಕುಡಿಯುವ ನೀರಿಗೆ ಬೇಕಾದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ ಎಂದು ಶಾಸಕ ಆರ್‌.ಅಶೋಕ ದೂರಿದರು.

ಬಿಜೆಪಿ ಪ್ರಮುಖ ನಾಯಕರ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು,‘ ಸರ್ವ ಪಕ್ಷಗಳ ಸಭೆಯಲ್ಲಿ ಸರ್ಕಾರದ ನಿಲುವನ್ನು ವಿರೋಧಿಸುತ್ತೇವೆ. ಸಭೆಯನ್ನು ಬಹಿಷ್ಕರಿಸುವುದಿಲ್ಲ’ ಎಂದು ಹೇಳಿದರು.

‘ಇಂಡಿಯಾ’ ಪಾಲುದಾರ ಪಕ್ಷವಾದ ಡಿಎಂಕೆಯನ್ನು ಖುಷಿಪಡಿಸಲು ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ. ಹಿಂದೆ ಮೇಕೆದಾಟು ವಿಚಾರವಾಗಿ ರಸ್ತೆಯಲ್ಲಿ ಓಡಾಡಿ ಹೋರಾಟ ಮಾಡುವುದಾಗಿ ಹೇಳುತ್ತಿದ್ದವರು ಈಗ ತಮಿಳುನಾಡನ್ನು ಓಲೈಸುವ ಲಕ್ಷಣ ಕಾಣುತ್ತಿವೆ ಎಂದರು.

ADVERTISEMENT

ಜನರ ಪ್ರಶ್ನೆಗಳಿಗೆ ಉತ್ತರಿಸಿ: ಬೊಮ್ಮಾಯಿ

‘ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಬಗ್ಗೆ ವಿರೋಧ ಪಕ್ಷಗಳಿಗೆ ಉತ್ತರಿಸುವುದನ್ನು ಬಿಟ್ಟು ರಾಜ್ಯ ಜನ ಮತ್ತು ರೈತರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿ’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

‘ಕಾವೇರಿ ನೀರಿನ ವಿಷಯದಲ್ಲಿ ರಾಜ್ಯದ ಜನರ ಮತ್ತು ರೈತರ ಹಿತ ಕಾಪಾಡುವ ಸರ್ಕಾರದ ತೀರ್ಮಾನಕ್ಕೆ ನಾವು ಸಹಕರಿಸುತ್ತೇವೆ’ ಎಂದು ಅವರು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.