ADVERTISEMENT

ತಮಿಳುನಾಡಿಗೆ ನೀರು: ಬೆಂಗಳೂರಿಗೆ ಕುಡಿಯುವ ನೀರಿನ ಲಭ್ಯತೆ ಬಗ್ಗೆ ದೇವೇಗೌಡ ಆತಂಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2023, 13:28 IST
Last Updated 18 ಸೆಪ್ಟೆಂಬರ್ 2023, 13:28 IST
ಎಚ್‌.ಡಿ. ದೇವೇಗೌಡ
ಎಚ್‌.ಡಿ. ದೇವೇಗೌಡ   

ನವದೆಹಲಿ: ತಮಿಳುನಾಡಿಗೆ ಪ್ರತಿನಿತ್ಯ 15 ದಿನಗಳವರೆಗೆ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಸಂಸದ ದೇವೇಗೌಡ, ನಮ್ಮ ರಾಜ್ಯದ ರಾಜಕಾರಣಿಗಳಲ್ಲಿ ಒಗ್ಗಟ್ಟು ಇಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರ, ಇವತ್ತಿನ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶ ಮಹತ್ತರವಾದ ಪೆಟ್ಟು ಎಂದು ಹೇಳಿದ್ದಾರೆ.

ಬೆಂಗಳೂರಿಗೆ ಕುಡಿಯುವ ನೀರು ಬೇಕು, ಮುಂದೇನು ಆಗುತ್ತದೆ ಎಂದು ಗೊತ್ತಿಲ್ಲ. ನಮ್ಮ ರಾಜ್ಯ ಸರಕಾರ ತೆಗೆದುಕೊಂಡ ನಿರ್ಣಯ ದುರಂತ. ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರೋ ಗೊತ್ತಿಲ್ಲ. ನಾವು ಎಲ್ಲೋ ಒಂದು ಕಡೆ ಎಡವಿದ್ದೇವೆ ಎಂದು ಹೇಳಿದರು.

ADVERTISEMENT

ನಮ್ಮ ರಾಜ್ಯದ ಆಗುವ ಅನ್ಯಾಯಕ್ಕೆ ಮೊದಲು ಧರಣಿ ಮಾಡಿದ್ದೆ. ಧರಣಿ ಕೂತು ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಇವತ್ತು ಸದನದಲ್ಲಿ ಕಾವೇರಿ ವಿಚಾರ ಎತ್ತಿದ್ದೇನೆ. ಕರ್ನಾಟಕ,ತಮಿಳುನಾಡಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್ ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಅಧಿಕಾರಿಗಳ ತಂಡ ಸಲ್ಲಿಸಲಿ ಎಂದು ಅವರು ಆಗ್ರಹಿಸಿದರು.

ಪ್ರಾಧಿಕಾರದ ಆದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ತಮಿಳುನಾಡುವ ಒಪ್ಪಿಕೊಳ್ಳುತ್ತಿಲ್ಲ. ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟು ಇದೆ.ನಮ್ಮ ರಾಜಕಾರಣಿಗಳಲ್ಲಿ ಒಗ್ಗಟ್ಟು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮೈತ್ರಿ ಬಗ್ಗೆ ಈಗ ಯಾವುದೆ ಚರ್ಚೆ ಇಲ್ಲ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಬಗ್ಗೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ದೇವೇಗೌಡ ಹೇಳಿದರು. ನಾನು ಯಾವತ್ತು ಪ್ರತ್ಯೇಕವಾಗಿ ಪ್ರಧಾನಿ ಭೇಟಿಯಾಗಲ್ಲ. ಮೈತ್ರಿ ವಿಚಾರವಾಗಿ ನಾನು ಯಾರನ್ನೂ ಭೇಟಿ ಮಾಡಿಲ್ಲ. ಚರ್ಚೆಗೆ ಬಂದಾಗ ಮಾತಾಡುತ್ತೇವೆ. ಈಗ ಎಲ್ಲಿದ್ದೇವೆ ಅಲ್ಲೆ ಇರುತ್ತೇವೆ ಎಂದು ಹೇಳಿದರು.

ಇಂಡಿಯಾ ಸಭೆಗೆ ನಮ್ಮನ್ನು ಕರೆಯುವುದೆ ಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಿತೀಶ್ ಕುಮಾರ್‌ ಅವರಿಗೆ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.