ADVERTISEMENT

ಸಿಬಿಐ ರೇಡ್‌ಗೂ ನನಗೂ ಸಂಬಂಧ ಇಲ್ಲ– ಎಚ್‌.ಡಿ.ಕುಮಾರಸ್ವಾಮಿ 

ಫೋನ್‌ ಕದ್ದಾಲಿಕೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2019, 9:07 IST
Last Updated 26 ಸೆಪ್ಟೆಂಬರ್ 2019, 9:07 IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ    

ಬೆಂಗಳೂರು: ‘ಯಾರ ಮನೆ ಮೇಲಾದರೂ ರೇಡ್‌ ಮಾಡಿಕೊಳ್ಳಲಿ. ನನ್ನನ್ನು ಯಾಕೆ ಕೇಳುತ್ತೀರಿ, ನನಗೇನು ಸಂಬಂಧ? ಎಲ್ಲರ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ಮಾಡಿಕೊಳ್ಳುತ್ತಾರೆ’ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದೆ. ಈ ವಿಚಾರವಾಗಿ ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

‘ಅವರ ಮನೆ ಮೇಲೆ ರೇಡ್‌ ಮಾಡಿದರೆ ನಾನು ಏಕೆ ತಲೆ ಕೆಡಿಸಿಕೊಳ್ಳಲಿ. ಸಿಬಿಐ ರೇಡ್‌ಗೂ ನನಗೂ ಸಂಬಂಧ ಇಲ್ಲ. ನನ್ನ ತನಿಖೆಗೆ ಬೇಕಾದರೂ ಬರಲಿ, ದೇಶದ ಕಾನೂನಿನಲ್ಲಿ ಯಾರ ಮೇಲೆ ಬೇಕಾದರೂ ವಿಚಾರಣೆಗೆಅವಕಾಶವಿದೆ. ಅದಕ್ಕೆ ಏಕೆ ಗಾಬರಿ?‘ ಎಂದು ಪ್ರಶ್ನಿಸಿದರು.

ಅಲೋಕ್ ಕುಮಾರ್ ಈಗಲೂ ದಕ್ಷ ಅಧಿಕಾರಿಯೇ ಎಂದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.