ADVERTISEMENT

ಡಿಕೆಶಿ ತನಿಖೆಗೆ ಒಳಗಾಗಿ ಸೀತೆಯಂತೆ ಹೊರಗೆ ಬರಲಿ: ಸಚಿವ ಕೆ.ಎಸ್‌. ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 6:59 IST
Last Updated 5 ಅಕ್ಟೋಬರ್ 2020, 6:59 IST
ಕೆ.ಎಸ್‌.ಈಶ್ವರಪ್ಪ
ಕೆ.ಎಸ್‌.ಈಶ್ವರಪ್ಪ   

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ನಡೆದ ದಾಳಿ ರಾಜಕೀಯ ಉದ್ದೇಶದಿಂದ ಕೂಡಿಲ್ಲ. ಡಿ.ಕೆ. ಶಿವಕುಮಾರ್‌ ತನಿಖೆಗೆ ಒಳಗಾಗಲಿ. ಸೀತೆಯಂತೆ ಹೊರಗೆ ಬರಲಿ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಡಿ.ಕೆ. ಶಿವಕುಮಾರರ್‌ ಮನೆಯ ಮೇಲೆ ಈ ಹಿಂದೆ ಕೂಡಾ ದಾಳಿ ಆಗಿದೆ. ಇದು ಹೊಸದಲ್ಲ. ಹವಾಲಾ ಹಣ ಸಿಕ್ಕಿರುವ ಬಗ್ಗೆ ಹಿಂದಿನ ದಾಳಿಯಲ್ಲಿ ಗೊತ್ತಾಗಿತ್ತು. ಹೀಗಾಗಿ ತನಿಖೆ ನಡೆಯುತ್ತಿದೆ’ ಎಂದರು.

‘ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರ ಹೇಳಿಕೆ ಕಂಡು ಆಶ್ಚರ್ಯ ಆಯಿತು. ಹಿಂದೆ ಯಡಿಯೂರಪ್ಪ ಮೇಲೂ ಸಹ ದಾಳಿ ಆಗಿತ್ತು. ಆಗ ಕಾಂಗ್ರೆಸ್ ನಾಯಕರು ಏನೆಂದು ಹೇಳಿಕೆ ಕೊಟ್ಟಿದ್ದರು. ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದಿದ್ದರು. ಕಾಂಗ್ರೆಸ್‌ಗೊಂದು ಕಾನೂನು ಬೇರೆ ಇದೆಯಾ’ ಎಂದೂ ಪ್ರಶ್ನಿಸಿದರು.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.