ADVERTISEMENT

ಡಿಕೆಶಿ ವಿರುದ್ಧ ಅಕ್ರಮ‌ ಆಸ್ತಿ ಸಂಪಾದನೆ ಆರೋಪ: 14 ಕಡೆಗಳಲ್ಲಿ ಸಿಬಿಐ ಶೋಧ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 6:14 IST
Last Updated 5 ಅಕ್ಟೋಬರ್ 2020, 6:14 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಸಂಪಾದಿಸಿದ ಆರೋಪದಡಿ ಪ್ರಕರ ದಾಖಲಿಸಿದ್ದು, ಕರ್ನಾಟಕ, ದೆಹಲಿ ಮತ್ತು ಮುಂಬೈನ 14 ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.

ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಸಿಬಿಐ ಅಧಿಕಾರಿಗಳು, 'ಕರ್ನಾಟಕದ ಒಂಭತ್ತು, ದೆಹಲಿಯ ನಾಲ್ಕು ಮತ್ತು ಮುಂಬೈನ ಒಂದು ಸ್ಥಳದಲ್ಲಿ ಶೋಧ ನಡೆಸಲಾಗುತ್ತಿದೆ' ಎಂದು ತಿಳಿಸಿದ್ದಾರೆ.

ಸಿಬಿಐನ ಬೆಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಪ್ರಕರಣ (RC-10/A/2020- BANGALORE) ದಾಖಲಿಸಿದೆ. ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದೆ.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.