ADVERTISEMENT

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ: ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 5:55 IST
Last Updated 5 ಅಕ್ಟೋಬರ್ 2020, 5:55 IST
ಯುವ ಕಾಂಗ್ರೆಸ್‌ ಕಾರ್ಯಕರ್ತರು- ಸಾಂದರ್ಭಿಕ ಚಿತ್ರ
ಯುವ ಕಾಂಗ್ರೆಸ್‌ ಕಾರ್ಯಕರ್ತರು- ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದ ಸಿಬಿಐ ದಾಳಿಯನ್ನು ಖಂಡಿಸಿ, ಅವರ ಮನೆಯ ಎದುರು ರಸ್ತೆಯಲ್ಲಿ ಕುಳಿತು ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಾರೆ. ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.

ಪ್ರತಿಭಟನೆ ನಿರತರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿಯೂ ನಡೆದಿದೆ.

ADVERTISEMENT

ಇದನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.