ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ನಿನ್ನೆಯಷ್ಟೇ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ನಿವಾಸದ ಮೇಲೆ ದೆಹಲಿ ಮೂಲದ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ದಾಳಿ ಸಂಬಂಧ ಬೇಗ್ ಪತ್ನಿಗೆ ಮಾಹಿತಿ ನೀಡಿ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಐಎಂಎ ವಂಚನೆ ಪ್ರಕರಣದ ಕುರಿತಾಗಿ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ನಿನ್ನೆ ವಿಚಾರಣೆ ನಡೆಸಿದ್ದರು. ಪ್ರಕರಣದ ಆರೋಪಿ ಮನ್ಸೂರ್ ಮಾಡಿದ್ದ ಆರೋಪಗಳ ಸಂಬಂಧ ಸಾಕ್ಷ್ಯಾಧಾರಗಳು ಸಿಕ್ಕಿರುವುದರಿಂದ ಬೇಗ್ ಅವರನ್ನು ಬಂಧಿಸಿದ್ದರು. ನ್ಯಾಯಾಲಯ ಬೇಗ್ ಅವರಿಗೆ 14ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.