ADVERTISEMENT

ಡಿ.ಕೆ.‌ ಶಿವಕುಮಾರ್ ನಿವಾಸ, ಕಚೇರಿ ಮೇಲೆ ದಾಳಿ: ಸಿಬಿಐ ಕಚೇರಿಗೆ ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 6:25 IST
Last Updated 5 ಅಕ್ಟೋಬರ್ 2020, 6:25 IST
ಬೆಂಗಳೂರಿನಲ್ಲಿರುವ ಸಿಬಿಐ ಕಚೇರಿ
ಬೆಂಗಳೂರಿನಲ್ಲಿರುವ ಸಿಬಿಐ ಕಚೇರಿ    

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಆಪ್ತರ ಮನೆ, ಕಚೇರಿಗಳ ಮೇಲೆ ಸೋಮವಾರ ಬೆಳಿಗ್ಗೆ ಸಿಬಿಐ ದಾಳಿ ನಡೆದಿರುವ ಬೆನ್ನಲ್ಲೇ ಇಲ್ಲಿನ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಸಿಬಿಐ ಕಚೇರಿ ಸುತ್ತಲೂ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಸಿಬಿಐ ಅಧಿಕಾರಿಗಳ ಹೊರತಾಗಿ ಯಾರೂ ಒಳಕ್ಕೆ ಬರದಂತೆ ನಿರ್ಬಂಧ ಹೇರಲಾಗಿದೆ. ಸಿಬಿಐ ಕಚೇರಿಯ ಸುತ್ತಲೂ ಬೃಹತ್ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ನಿವಾಸಗಳ ಸುತ್ತಲೂ ಪೊಲೀಸ್ ಭದ್ರತೆ ಹೆಚ್ಚಿಸಲಾಗುತ್ತಿದೆ. ಎರಡೂ ಮನೆಗಳ ಮೇಲೆ ದಾಳಿ‌ಮಾಡಿರುವ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಕಾರ್ಯಕರ್ತರು ಗುಂಪು ಗುಂಪಾಗಿ ಬರುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.